ಜ.31ರಂದು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಯಶಸ್ವಿ ಪ್ರಾಧ್ಯಾಪಕ ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಗೌರವ ಸಮಾರಂಭವನ್ನು ಆಯೋಜಿಸಲಾಗಿದೆ.

ಈ ಸಮಾರಂಭದಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಎಸ್. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಇದೇ ವೇಳೆ, ಕ್ಷೇಮವನ, ಬೆಂಗಳೂರು ಸಂಸ್ಥೆಯ ಕಾರ್ಯನಿರ್ವಹಕ ನಿರ್ದೇಶಕಿ ಶ್ರೀಮತಿ ಶ್ರದ್ಧಾ ಅಮಿತ್ ಅವರು ಸಾಕ್ಷ್ಯ ಚಿತ್ರದ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಅವರು ವಹಿಸಲಿದ್ದು, ಉಜಿರೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗಡೆ ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು.

ಈ ಅಭಿನಂದನಾ ಕಾರ್ಯಕ್ರಮವು ಜನವರಿ 31, ಶನಿವಾರ ಬೆಳಿಗ್ಗೆ 10 ಗಂಟೆಗೆ ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.